ವರದಿಗಾರರು :
ಕೊಟ್ರಪ್ಪ ||
ಸ್ಥಳ :
ದಾವಣಗೆರೆ
ವರದಿ ದಿನಾಂಕ :
26-11-2025
ಜೇವರ್ಗಿಯಲ್ಲಿ ದುರಂತ ಅಪಘಾತ – ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ದುರ್ಮರಣ
ಕಲಬುರಗಿಯ ಜೇವರ್ಗಿ ಬೈಪಾಸ್ ಬಳಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ದಾವಣಗೆರೆ ಜಿಲ್ಲೆಯ ಮಾಜಿ ಜಿಲ್ಲಾಧಿಕಾರಿ ಹಾಗೂ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಮೃತಪಟ್ಟಿದ್ದಾರೆ. ವಿಜಯಪುರದಿಂದ ಕಲಬುರಗಿಗೆ ಪ್ರಯಾಣಿಸುತ್ತಿರುವ ವೇಳೆ ಅವರ ಕಾರು ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿ. ಈ ದುರಂತದಲ್ಲಿ ಮಹಾಂತೇಶ್ ಬೀಳಗಿ ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಜೇವರ್ಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ. ರಾಜ್ಯ ಆಡಳಿತ ವಲಯದಲ್ಲಿ ಶಾಕ್ ತರಿಸಿದ ಘಟನೆ ಇದಾಗಿದೆ.
