ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಮಳೆ ಮತ್ತು ಚಳಿ : ಹವಾಮಾನ ಇಲಾಖೆ
ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಮುಂದಿನ ಕೆಲ ದಿನಗಳು ಹವಾಮಾನದಲ್ಲಿ ಸ್ಪಷ್ಟ ಬದಲಾವಣೆ ಕಾಣಿಸಿಕೊಳ್ಳಲಿದೆ. ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ಪ್ರಕಾರ, ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಮಳೆ ಮತ್ತು ಚಳಿ ಎರಡೂ ಸೇರಿ ಜನರಿಗೆ ತೊಂದರೆ ನೀಡುವ ಸಾಧ್ಯತೆ ಇದೆ.
ವಿಶೇಷವಾಗಿ ರಾಜಧಾನಿ ಬೆಂಗಳೂರಿನಲ್ಲಿ ಚಳಿ ತೀವ್ರವಾಗುವ ಲಕ್ಷಣಗಳು ಕಂಡುಬಂದಿವೆ.
ಬೆಂಗಳೂರು ನಗರದಲ್ಲಿ ಮುಂದಿನ ನಾಲ್ಕು ದಿನಗಳವರೆಗೆ ತಾಪಮಾನ ಗಣನೀಯವಾಗಿ ಇಳಿಕೆಯಾಗಲಿದೆ. ಆರಂಭದಲ್ಲಿ ಎರಡು ದಿನ ಮೋಡ ಮುಸುಕಿದ ವಾತಾವರಣ ಇರಲಿದ್ದು, ಮಧ್ಯಮ ಪ್ರಮಾಣದ ಮಳೆಯ ಸಾಧ್ಯತೆಯೂ ಇದೆ ಎಂದು ಇಲಾಖೆ ತಿಳಿಸಿದೆ. ಜನವರಿ 9 ಮತ್ತು 10ರಂದು ನಗರದಲ್ಲಿ ಮಳೆಯಾಗುವ ಸಂಭವ ಹೆಚ್ಚಿದೆ.
ಇನ್ನೊಂದೆಡೆ ಉತ್ತರ ಕರ್ನಾಟಕ ಭಾಗದಲ್ಲಿ ಮುಂದಿನ ಐದು ದಿನ ಚಳಿ ಹೆಚ್ಚಳವಾಗಲಿದೆ. ಬೆಳಿಗ್ಗೆ ಹಾಗೂ ರಾತ್ರಿ ಸಮಯದಲ್ಲಿ ತೀವ್ರ ಚಳಿಯಿಂದ ಜನರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಕರಾವಳಿ ಪ್ರದೇಶಗಳು ಮತ್ತು ದಕ್ಷಿಣ ಒಳನಾಡಿನಲ್ಲೂ ಚಳಿ ಮುಂದುವರಿಯಲಿದ್ದು, ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಇತರೆ ಸುದ್ದಿಗಳು